ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 58 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಹುದ್ದೆಗಳಿಗೆ ಅರ್ಜಿಯನ್ನು ದಿನಾಂಕ 09 ಸೆಪ್ಟೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು 13 ಸೆಪ್ಟೆಂಬರ್ 2024ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಹಾರ್ಡ್‌ಕಾಫಿ ಕಳುಹಿಸುವ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex, K.H. Road, Shanthinagar, Bengaluru 560027
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 30,000/- 32,950/- ರು ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ಕ ಮಾಡುವ ಮೂಲಕ ಸವಿವರವಾದ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.





Comments