ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 69 ಸ್ಟೇಷನ್ ಕಂಟ್ರೋಲರ್ / ಟ್ರೇನ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10 ಜುಲೈ 2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿ ಸಲ್ಲಿಸುವ ವಿಳಾಸ :
General Manager (HR), Bangalore Metro Rail Corporation Limited,
III Floor, BMTC Complex, K.H. Road, Shanthinagar,
Bengaluru-560027
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ Diploma/ Engineering ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.




Comments