ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 300 ಹುದ್ದೆಗಳನ್ನು ಭರ್ತಿ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಜ್ಯ ಸಾರಿಗೆ ಸಂಸ್ಥೆಯ ಒಂದು ಭಾಗವಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 300 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು SSLC ಜೊತೆಗೆ ITI ಪೂರೈಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30/03/2022 ರೊಳಗೆ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 300
* ಮೆಕಾನಿಕ್ ಡೀಸೆಲ್ - 250
* ಫಿಟ್ಟರ್ - 50
ಅರ್ಜಿ ಸಲ್ಲಿಸುವ ವಿಳಾಸ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ತರಬೇತಿ ಕೇಂದ್ರ, 2ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು - 560027.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು S.S.L.C ಅಥವಾ I.T.I ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದಿನಾಂಕ 30 ಮಾರ್ಚ್ 2022 ಕ್ಕೆ ಅನ್ವಯಿಸುವಂತೆ ಕನಿಷ್ಟ 16 ವರ್ಷಮತ್ತುಗರಿಷ್ಟ 26 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ
- SSLC ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 6,000/- ಮತ್ತು
- ITI ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 7,000/- ತರಬೇತಿ ಭತ್ಯೆಯನ್ನು ನಿಗದಿಪಡಿಸಲಾಗಿದೆ.
- ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ವಿವರವಾಗಿ ಅಧಿಸೂಚನೆಯಲ್ಲಿ ವಿವರಿಸಲಾಗಿದ್ದು, ಅಭ್ಯರ್ಥಿಗಳು ಗಮನವಿಟ್ಟು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments