ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಪೂರ್ಣ ಸಮಯದ ಅಪ್ರೆಂಟಿಸ್‌ಗಳು (ಶಿಶಿಕ್ಷು) ಹಾಗೂ ಡಿಪ್ಲೊಮಾ ಅಪ್ರೆಂಟಿಸ್‌ಗಳ (ಶಿಶಿಕ್ಷು) ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-Mar-2023 ರೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 636
ಪೂರ್ಣ ಸಮಯದ ಅಪ್ರೆಂಟಿಸ್‌ಗಳು(ಶಿಶಿಕ್ಷು) - 550
ಡಿಪ್ಲೊಮಾ ಅಪ್ರೆಂಟಿಸ್‌ಗಳು(ಶಿಶಿಕ್ಷು) - 43
ಪದವೀಧರ ಅಪ್ರೆಂಟಿಸ್‌ಗಳು(ಶಿಶಿಕ್ಷು) - 43
ದಾಖಲೆ ಪರಿಶಿನೆಯ ವಿಳಾಸ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಕಟ್ಟಡ,
ಆಡಳಿತ ಇಲಾಖೆ, 5 ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣದ ಪಕ್ಕದಲ್ಲಿ, ಬೆಂಗಳೂರು – 560027
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳುನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ITI/ ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 15-Mar-2023 ರಂತೆ ಕನಿಷ್ಠ 16 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನ (ಸ್ಟೈಪೆಂಡ್) ನೀಡಲಾಗುವದು.
ಪೂರ್ಣ ಸಮಯದ ಅಪ್ರೆಂಟಿಸ್(ಶಿಶಿಕ್ಷು) ಅಭ್ಯರ್ಥಿಗಳಿಗೆ 6000-7000/- ರೂ.
ಡಿಪ್ಲೊಮಾ ಅಪ್ರೆಂಟಿಸ್(ಶಿಶಿಕ್ಷು) ಅಭ್ಯರ್ಥಿಗಳಿಗೆ 8000/- ರೂ
ಪದವೀಧರ ಅಪ್ರೆಂಟಿಸ್(ಶಿಶಿಕ್ಷು) ಅಭ್ಯರ್ಥಿಗಳಿಗೆ 9000/- ರೂ ಗಳ ವರೆಗೆ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments