ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2,500 ನಿರ್ವಾಹಕರು (Conductor) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನl ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ2,500 ನಿರ್ವಾಹಕರು (Conductor) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 19-ಏಪ್ರಿಲ್- 2024 ಹಾಗೂ ಕೊನೆಯ ದಿನಾಂಕ 18-ಮೇ-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುPUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (2A / 2B / 3A / 3B) ಅಭ್ಯರ್ಥಿಗಳಿಗೆ : 750/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : 500/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* 2A / 2B / 3A / 3B ಅಭ್ಯರ್ಥಿಗಳಿಗೆ : 38 ವರ್ಷ
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ : 40 ವರ್ಷ
* ಮಾಜಿ ಸೈನಿಕ ಮತ್ತು ಇಲಾಖಾ ಅಭ್ಯರ್ಥಿಗಳಿಗೆ : 45 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,660/- ರೂ ಗಳಿಂದ 25,300/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments