ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತೀಯ ರಾಷ್ಟ್ರೀಕೃತ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಕಂಪನಿಯಾಗಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಆರ್ಥಿಕ ಸಾಕ್ಷರತಾ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/08/2022 ರೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ:
ಬ್ಯಾಂಕ್ ಆಫ್ ಬರೋಡಾ, ಪ್ರಾದೇಶಿಕ ಕಛೇರಿ-UDUPI-II,
2 ನೇ ಮಹಡಿ, ಶಾಮಿಲಿ ಇನ್, ಅಂಬಲಪಾಡಿ, ಉಡುಪಿ – 576103,
ಈ ವಿಳಾಸಕ್ಕೆ 30/08/2022 ಅಥವಾ ಮೊದಲು ಅರ್ಜಿಯನ್ನು ಕಳುಹಿಸಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಗರಿಷ್ಠ 64 ವರ್ಷಗಳ ವಯಸ್ಸು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 18,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments