ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 143 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 143 ಕ್ರೆಡಿಟ್ ಆಫೀಸರ್ಸ್, ಲಾ ಆಫೀಸರ್ಸ್, ಚೀಫ್ ಮ್ಯಾನೇಜರ್ – ಎಕನಾಮಿಸ್ಟ್, ಡೇಟಾ ಸೈಂಟಿಸ್ಟ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಡೇಟಾ ಕ್ವಾಲಿಟಿ ಡೆವೆಲಪರ್, ಡೇಟಾ ಗವರ್ನನ್ಸ್ ಎಕ್ಸ್ ಪರ್ಟ್, ಟೆಕ್ನಿಕಲ್ ಎನಾಲಿಸ್ಟ್, ಎಕನಾಮಿಸ್ಟ್, ಮತ್ತು ಸೀನಿಯರ್ ಮ್ಯಾನೇಜರ್– IT –ಸೆಕ್ಯೂರಿಟಿ ಎನಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ27 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 10.ಏಪ್ರಿಲ್.2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, Diploma/ B.Sc/ BE/ B.Tech/ LLB/ LLM/ MBA ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 850/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 175/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 23 ವರ್ಷ ಮತ್ತು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments