ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಸಂಸ್ಥೆ (BRBNMPL)ಯಲ್ಲಿ ಖಾಲಿ ಇರುವ04 ಸಹಾಯಕ ವ್ಯವಸ್ಥಾಪಕರು (ಭದ್ರತೆ) ಮತ್ತು ಭದ್ರತಾ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06 ಸೆಪ್ಟೆಂಬರ್ 2024 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾಟ್ ಲಿಸ್ಟ್ ಮಾಡುವ ಮೂಲ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಜನರಲ್ ಮ್ಯಾನೇಜರ್, ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರನ್ ಪ್ರೈವೇಟ್ ಲಿಮಿಟೆಡ್ ನಂ.3 & 4, I ಹಂತ, I ಹಂತ, B.T.M. ಲೇಔಟ್, ಬನ್ನೇರುಘಟ್ಟ ರಸ್ತೆ ಅಂಚೆ ಪೆಟ್ಟಿಗೆ ಸಂಖ್ಯೆ 2924, ಡಿ.ಆರ್. ಕಾಲೇಜು P.O., ಬೆಂಗಳೂರು-560029
ಹುದ್ದೆಗಳ ವಿವರ : 04
ಸಹಾಯಕ ವ್ಯವಸ್ಥಾಪಕರು (ಭದ್ರತೆ) - 3
ಭದ್ರತಾ ವ್ಯವಸ್ಥಾಪಕ - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನಿಸಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿಸಲು 300/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 23 ಹಾಗೂ ಗರಿಷ್ಠ 52 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಸಹಾಯಕ ವ್ಯವಸ್ಥಾಪಕರು (ಭದ್ರತೆ) - ರೂ.56100/-
ಭದ್ರತಾ ವ್ಯವಸ್ಥಾಪಕ - 69700/- ರೂಗಳವರೆಗೆ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


Comments