ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 1284 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಕಾನ್ ಸ್ಟೇಬಲ್ ಸೇರಿದಂತೆ ಟೇಲರ್, ಕುಕ್, ವಾಟರ್ ಕ್ಯಾರಿಯರ್, ವಾಷರ್ ಮನ್, ಸ್ವೀಪರ್, ವೇಟರ್ ಹುದ್ದೆಗಳನ್ನೊಳಗೊಂಡಂತೆ ಒಟ್ಟು 1284 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು 12 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1284
ಪುರುಷ ಅಭ್ಯರ್ಥಿಗಳು - 1220
ಮಹಿಳಾ - 64
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ, PUC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ 21,700/-ರೂ ಗಳಿಂದ 69,100/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments