Loading..!

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 1410 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: ITI SSLC
Published by: Tajabi Pathan | Date:4 ಫೆಬ್ರುವರಿ 2023
not found

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ಖಾಲಿ ಇರುವ ಪುರುಷ ಮತ್ತು ಮಹಿಳಾ ಕಾನ್ ಸ್ಟೇಬಲ್ (ಟ್ರೇಡ್ಸ್ ಮನ್) 1410 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 01/03/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1410 
ಕಾನ್ ಸ್ಟೇಬಲ್ ಪುರುಷ ಅಭ್ಯರ್ಥಿಗಳು : 1343 
ಕಾನ್ ಸ್ಟೇಬಲ್ ಮಹಿಳಾ ಅಭ್ಯರ್ಥಿಗಳು : 67 

No. of posts:  1410
Application Start Date:  4 ಫೆಬ್ರುವರಿ 2023
Application End Date:  1 ಮಾರ್ಚ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC, ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 25 ವರ್ಷಗಳವರೆಗೆ  ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಹುದ್ದೆಗಳಿಗೆ ಅನುಗುಣವಾಗುವಂತೆ 21,700/- ರಿಂದ 69,100/- ರೂ ವೇತನವನ್ನು ನಿಗದಿಪಡಿಸಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments