ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 275 ಕಾನ್ಸ್ಟೇಬಲ್ (GD) ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು 275 (Constable (GD)) ಹುದ್ದೆಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು 01/12/2024 ಪ್ರಾರಂಭಗೊಂಡು, 30/12/2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 147/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 /- ರೂಗಳವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments