ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ಖಾಲಿ ಇರುವ ಪುರುಷ ಮತ್ತು ಮಹಿಳಾ ಸಬ್ ಇನ್ಸ್ ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 01/03/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 96
ಸಬ್ ಇನ್ಸ್ ಪೆಕ್ಟರ್ - 09
ಕಾನ್ ಸ್ಟೇಬಲ್ - 21
ASI ಹುದ್ದೆ - 01
HC ಹುದ್ದೆ - 01
ಕಾನ್ ಸ್ಟೇಬಲ್ (ಜನರೇಟರ್ ಆಪರೇಟರ್, ಜನರೇಟರ್ ಮೆಕ್ಯಾನಿಕ್, ಲೈನ್ ಮ್ಯಾನ್) - 38
HC (ವೆಟರ್ನರಿ) - 18
ಕಾನ್ ಸ್ಟೇಬಲ್ (ಕೆನಲ್ ಮ್ಯಾನ್) - 08
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದಾಖಲೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗುವಂತೆ SSLC / ITI/ PUC/ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 25 ವರ್ಷಗಳವರೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಹುದ್ದೆಗಳಿಗೆ ಅನುಗುಣವಾಗುವಂತೆ 21,700/- ರಿಂದ 81,100/- ರೂ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments