ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 6 ಕಾನೂನು ಅಧಿಕಾರಿ ಗ್ರೇಡ್ ll/ ಡೆಪ್ಯೂಟಿ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12/06/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗುವಂತೆ LLB/ MLB ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು (OBC) ಪುರುಷರು ಅಭ್ಯರ್ಥಿಗಳಿಗೆ ರೂಪಾಯಿ 400/- ಅರ್ಜಿ ಶುಲ್ಕವನ್ನು ಪಾವತಿಸಬೇಕು. SC, ST, ಬಿ ಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ 47.2 ರೂ ಅರ್ಜಿ ಶುಲ್ಕ ಇರಲಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ಹೊಂದಿರಬೇಕು.
ಭಾರತ ಸರ್ಕಾರದ ಪ್ರಕಾರ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು 67,700/- ರೂಗಳಿಂದ 2,08,700/- ಗಳ ವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments