ಕೇಂದ್ರೀಯ ತೆರಿಗೆ ಆಯುಕ್ತರ ಕಚೇರಿಯಲ್ಲಿ ಕ್ರೀಡಾ ಕೋಟದ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ತೆರಿಗೆ ಆಯುಕ್ತರ ಕಚೇರಿ (CBIC) ಯಲ್ಲಿ ಕ್ರೀಡಾ ಕೋಟದ ಅಡಿಯಲ್ಲಿ ಖಾಲಿ ಇರುವ 16 ಟ್ಯಾಕ್ಸ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್, ಮತ್ತು ಹವಾಲ್ದಾರ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕ್ರೀಡಾ ಪ್ರಯೋಗ, ದೈಹಿಕ ಪ್ರಮಾಣಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಆಗಸ್ಟ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಹುದ್ದೆಗಳ ವಿವರ : 16
ಟ್ಯಾಕ್ಸ್ ಅಸಿಸ್ಟೆಂಟ್ - 08
ಸ್ಟೆನೋಗ್ರಾಫರ್ ಗ್ರೇಡ್- 2 - 01
ಹವಾಲ್ದಾರ್ - 07
ಅರ್ಜಿ ಸಲ್ಲಿಸುವ ವಿಳಾಸ :
“The Sports Officer,
Office of the Commissioner of Central Taxes,
Bengaluru North Commissionerate,
No. 59, Ground Floor, HMT Bhawan,
Ganganagar, Bengaluru- 560032“
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC), SSLC ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಸ್ಟೆನೋಗ್ರಾಫರ್ ಗ್ರೇಡ್ - 2 ಹುದ್ದೆಗಳಿಗೆ 25,500/- ರೂ ಗಳಿಂದ 81,100/- ರೂ
ಹವಾಲ್ದಾರ್ ಹುದ್ದೆಗೆ - 18,000/- ರೂ ಗಳಿಂದ 56,900/- ರೂ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments