ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ 5000 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 5000 ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್ 03 2023 ರಂದು ಕೊನೆಗೊಳ್ಳುತ್ತದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 800/-
* PWD ಅಭ್ಯರ್ಥಿಗಳಿಗೆ ರೂ 400/-
* SC/ST/CAT-1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 600/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10000-15000/-ರೂಗಳ ವರೆಗೆ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments