Loading..!

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 253 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:19 ನವೆಂಬರ್ 2024
not found

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 253 ಮುಖ್ಯ ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕ, ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  253
Application Start Date:  19 ನವೆಂಬರ್ 2024
Application End Date:  3 ಡಿಸೆಂಬರ್ 2024
Last Date for Payment:  3 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪ್ಲಾಟ್‌ಫಾರ್ಮ್ ಪರೀಕ್ಷೆ/ ಸನ್ನಿವೇಶ ಆಧಾರಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.


ಹುದ್ದೆಗಳ ವಿವರ : 253
ಮುಖ್ಯ ವ್ಯವಸ್ಥಾಪಕರು - 10
ಹಿರಿಯ ವ್ಯವಸ್ಥಾಪಕ - 56
ಮ್ಯಾನೇಜರ್ - 162
ಸಹಾಯಕ ವ್ಯವಸ್ಥಾಪಕ - 25 


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-12-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 03-12-2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech, MCA, ME/ M.Tech ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/- 
* SC/ST/CAT-1/ PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 23 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ 
- PWD ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,480/- ರೂ ಗಳಿಂದ 1,20,940/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Naveen K N ಡಿಸೆಂ. 6, 2024, 7:30 ಪೂರ್ವಾಹ್ನ