ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3000 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:12 ಮಾರ್ಚ್ 2024

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ06-03-2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 2024 ಮಾರ್ಚ್ 10 ರಂದು ಆನ್ ಲೈನ್ ಪರೀಕ್ಷೆ ನಡೆಸುವುದಾಗಿ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿ ಅರ್ಜಿ ಸಲ್ಲಿಸಲು 06-03-2024 ಕೊನೆಯ ದಿನಕವಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 27-03-2024 ವರೆಗೆ ವಿಸ್ತರಿಸಲಾಗಿದೆ.
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿ ಅರ್ಜಿ ಸಲ್ಲಿಸಲು 06-03-2024 ಕೊನೆಯ ದಿನಕವಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 27-03-2024 ವರೆಗೆ ವಿಸ್ತರಿಸಲಾಗಿದೆ.
No. of posts: 3000
Application Start Date: 24 ಫೆಬ್ರುವರಿ 2024
Application End Date: 27 ಮಾರ್ಚ್ 2024
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. .
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 800/-
* SC/ST/CAT-1/ ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 600/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* PWBD ಅಭ್ಯರ್ಥಿಗಳಿಗೆ ರೂ 400/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01.04.1996 ರಿಂದ 31.03.2004 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15000/- ಮಾಸಿಕ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments