ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 266 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 266 ಜೋನ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/-
* SC/ST/CAT-1/ PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
- PWD ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,480/- ರೂ ಗಳಿಂದ 85,920/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments