ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1303 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1303 ಅಸಿಸ್ಟಂಟ್ ಲೋಕೋ ಪೈಲಟ್, ಟ್ರೈನ್ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02-09-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1303
ಅಸಿಸ್ಟಂಟ್ ಲೋಕೋ ಪೈಲಟ್ - 732
ತಂತ್ರಜ್ಞ - 255
ಟ್ರೈನ್ ಮ್ಯಾನೇಜರ್- 82
ಜೂನಿಯರ್ ಇಂಜಿನಿಯರ್ - 234
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು Diploma/ B.Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments