Loading..!

ಗುಲ್ಬರ್ಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಇಲ್ಲಿ ಖಾಲಿ ಇರುವ 67 ಬೋಧಕ ಹುದ್ದೆಗಳಿಗೆ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನ
| Date:27 ಸೆಪ್ಟೆಂಬರ್ 2019
not found
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು 67 ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 1, 2019 ರಿಂದ ಅಕ್ಟೋಬರ್ 25, 2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅಕ್ಟೋಬರ್ 1,2019
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 25,2019
ಅರ್ಜಿ ಪ್ರತಿಯನ್ನು ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 4,2019

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 25, 2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಪ್ರಿಂಟೌಟ್‌ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನವೆಂಬರ್ 4, 2019ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಈ ಕೆಳಗೆ ನೀಡಿರುವ ಲಿಂಕ್ ಬಳಸಿ.
No. of posts:  67
Application Start Date:  1 ಅಕ್ಟೋಬರ್ 2019
Application End Date:  25 ಅಕ್ಟೋಬರ್ 2019
Work Location:  ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಗುಲ್ಬರ್ಗ
Qualification: ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪಿ.ಹೆಚ್‌ಡಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಪಡೆದ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1,500/ - ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Pay Scale: 20 ಪ್ರೊಫೆಸರ್ ಮತ್ತು 47ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Comments