ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/06/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 135
* Graduate Apprentices - 80
* Technician (Diploma) Apprentices - 55
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅವರನ್ನು ದಾಖಲೆಗಳ ಪರಿಶೀಲನೆಗೆ ಕರೆದು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma/ B.E/ B.Tech/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (2019, 2020 ಮತ್ತು 2021 ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 8000/- ಹಾಗೂ 9,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments