ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಚಾಮರಾಜನಗರ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 07-ನವೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು “ಸಾಮರ್ಥ್ಯ ಪ್ರರೀಕ್ಷೆ” ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ Diploma ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 200/- ರೂ ಅರ್ಜಿ ಶುಲ್ಕವನ್ನು ಹಾಗೂ SC/ ST/ PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 27650-650-29600-750-32600-850-36000-950-39800-1100-46400-1250-52650/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments