ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಚಾಮರಾಜನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ15 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಅಕ್ಟೋಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-ಸೆಪ್ಟೆಂಬರ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-ಅಕ್ಟೋಬರ್-2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆಯನ್ನು ಹಾಗೂ ಅಭ್ಯರ್ಥಿಗಳು ಸರ್ಟಿಫಿಕೇಷನ್ ಇನ್ ಲೈಬ್ರರಿ ಪ್ರಮಾಣ ಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು..ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ
ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments