ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಕಾರ್ಯಪಾಲ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರಾಮೀಣ ಕುಡಿಯುವ ಮೈಕ್ರೋಬಯೋಲಜಿ ಪರೀಕ್ಷೆಗಾಗಿ ಚಾಮರಾಜನಗರ ಜಿಲ್ಲಾ ಪ್ರಯೋಗಾಲಯ ದಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯೋಲಜಿಸ್ಟ್, ಜೂನಿಯರ್ ಮೈಕ್ರೋಬಯೋಲಜಿಸ್ಟ್ ಮತ್ತು ಅಟೆಂಡರ್/ಹೌಸ್ ಕೀಪಿಂಗ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 02/12/2024 ದಿಂದ ಪ್ರಾರಂಭಗೊಂಡು, 16/12/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಕಾರ್ಯಪಾಲಕ ಇಂಜಿನಿಯರ್ ರವರ ಕಚೇರಿ,
ಗ್ರಾ.ಕು.ನೀ. ಮತ್ತು ನೈರ್ಮಲ್ಯ ಇಲಾಖೆ, ನ್ಯಾಯಾಲಯದ ರಸ್ತೆ,
ಚಾಮರಾಜನಗರ ವಿಭಾಗ, ಚಾಮರಾಜನಗರ- 571313
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- senior microbiologist : 30000/-
- junior microbiologist : 20000/-
- microbiology Lab Attender/House keeping : 13000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments