Loading..!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:30 ಅಕ್ಟೋಬರ್ 2021
not found
ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ದಿನಾಂಕ : 28-10-2021 ರಿಂದ  29-11-2021 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  90
Application Start Date:  28 ಅಕ್ಟೋಬರ್ 2021
Application End Date:  29 ನವೆಂಬರ್ 2021
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೀಸಲಾತಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
Age Limit:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು. 

ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿಕ್ಕಬಳ್ಳಾಪುರ ಜಿಲ್ಲೆ, KA,
To Download the official notification

Comments