ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನ

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ವೈದ್ಯರು ಹಾಗೂ ವೈದ್ಯೆತರ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಆನ್‌ಲೈನ್ ಮೂಲಕ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 18/01/2022 ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ: 28
* Medical Officer - 03
* Staff Nurse - 22
* Ayush MO RBSK - 02
* Taluka ASHA Mentar Block Community Mobilizer - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದಲ್ಲಿ ಭರ್ತಿ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ಹುದ್ದೆಗಳಿಗೆ( ತಜ್ಞ ವೈದ್ಯರು ಹೊರತುಪಡಿಸಿ ) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು , ಕಿಯೋನಿಕ್ಸ್ ಸಂಸ್ಥೆ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* Medical Officer - Rs. 50,000/-
* Staff Nurse - Rs. 13,225/-
* Ayush MO RBSK - Rs. 25,000/-
* Taluka ASHA Mentar Block Community Mobilizer - Rs. 11,500/-
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments