ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ 35 ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10 ಏಪ್ರಿಲ್ 2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರ ಕಛೇರಿ, ಹಳೆಯ ಪಿ.ಡಬ್ಲ್ಯೂ.ಡಿ ಬಿಲ್ಡಿಂಗ್, ಆಜಾದ್ ಪಾರ್ಕ್ ಹತ್ತಿರ, ಚಿಕ್ಕಮಗಳೂರು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿಯಮಾನುಸಾರದಂತೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc ನರ್ಸಿಂಗ್ ಹಾಗೂ M.Sc ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ , ಪರಿಶಿಷ್ಠ ಪಂಗಡ, ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 250/- ,ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 500/-
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕೆಳಗೆ ನೀಡಿರುವ ವಯೋಮಿತಿಯನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 20000 /- ರೂ (ಸಂಚಿತ ವೇತನ) ನೀಡಲಾಗುತ್ತದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments