ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ 68 ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ, ಕಂಪ್ಯೂಟರ್ ಇಂಜಿನಿಯರ್ ಮತ್ತು ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/10/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 68
ಸಹಾಯಕ ಪ್ರಧಾನ ವ್ಯವಸ್ಥಾಪಕರು : 6
ಪ್ರಥಮ ದರ್ಜೆ ಗುಮಾಸ್ತ : 9
ದ್ವಿತೀಯ ದರ್ಜೆ ಗುಮಾಸ್ತ : 35
ಕಂಪ್ಯೂಟರ್ ಇಂಜಿನಿಯರ್ : 2
ವಾಹನ ಚಾಲಕರು : 2
ಅಟೆಂಡರ್/ ಸಹಾಯಕರು : 14
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲರು ಮತ್ತು ಮಾಜಿ ಸೈನಿಕ
* ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
* ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ : ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
* ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ : BE/ BSC/ BCA
* ವಾಹನ ಚಾಲಕರು ಮತ್ತು ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : SSLC ಜೊತೆಗೆ ಲಘು ಮತ್ತು ಬೃಹತ್ ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
* ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : SSLC ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1500/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 750/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
- ಸಹಾಯಕ ಪ್ರಧಾನ ವ್ಯವಸ್ಥಾಪಕರು : ರೂ.40900-78200/-
- ಪ್ರಥಮ ದರ್ಜೆ ಗುಮಾಸ್ತ : ರೂ.37900-70850/-
- ದ್ವಿತೀಯ ದರ್ಜೆ ಗುಮಾಸ್ತ : ರೂ.30350-58250/-
- ಕಂಪ್ಯೂಟರ್ ಇಂಜಿನಿಯರ್ : ರೂ.30350-58250/-
- ವಾಹನ ಚಾಲಕರು : ರೂ.27650-52650/-
- ಅಟೆಂಡರ್/ ಸಹಾಯಕರು : ರೂ.23500-47650/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments