ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:23 ಅಕ್ಟೋಬರ್ 2021

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ಚಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ತದನಂತರ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೊನೆಯ ದಿನಾಂಕವಾದ 10-11-2021 ರೊಳಗೆ ಪಿ.ಡಿ.ಒ ಅಥವಾ ಪಂಚಾಯ್ತಿ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
No. of posts: 1
Application Start Date: 22 ಅಕ್ಟೋಬರ್ 2021
Application End Date: 10 ನವೆಂಬರ್ 2021
Selection Procedure: ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು.
Qualification: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ SSLC ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
Age Limit: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿತ್ರದುರ್ಗ ಜಿಲ್ಲೆ, KA,





Comments