ಚಿತ್ರದುರ್ಗ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಪಿ.ಎಂ.ಅಬಿಮ್ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ ಚಿತ್ರದುರ್ಗ ಜಿಲ್ಲೆಯ ಹೊಳೆಲ್ಕೆರೆ, ಮೊಳಕಾಲ್ಮುರು, ನಾಯಕನಹಟ್ಟಿ ಹಾಗೂ ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ "ನಮ್ಮ ಕ್ಲಿನಿಕ್ " ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 20 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 12
ವೈದ್ಯಾಧಿಕಾರಿಗಳು - 04
ಶುಶ್ರೂಷಕಿ - 04
ಕಿರಿಯ ದರ್ಜೆ ಸಹಾಯಕರು/ ಪ್ರಯೋಗ ಶಾಲಾ ತಂತ್ರಜ್ಞರು - 04
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಯೋಜನಾ ನಿರ್ವಹಣಾ ಘಟಕ(ಎನ್.ಎಚ್.ಎಂ),
ಜಿಲ್ಲಾ ಪ್ರಯೋಗಶಾಲೆ ಆವರಣ, ಜಿಲ್ಲಾ ಆಸ್ಪತ್ರೆ ಹಿಂಭಾಗ ಚಿತ್ರದುರ್ಗ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಚಿತ್ರದುರ್ಗ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಾನುಸಾರದಂತೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC/ ಡಿಪ್ಲೊಮಾ/ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ
SC/ ST ಅಭ್ಯರ್ಥಿಗಳಿಗೆ 5 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಚಿತ್ರದುರ್ಗ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮದಂತೆ ಮಾಸ್ಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments