ಚಿತ್ರದುರ್ಗ ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಒಟ್ಟು 06 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ26/12/2023 ಸಂಜೆ 05:30ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಂಚೆ ಕಚೇರಿಯ ವಿಳಾಸ :
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪಕಾರ್ಯದರ್ಶಿಗಳು,
ಜಿಲ್ಲಾ ಪಂಚಾಯತ್ ಸ್ಟೇಡಿಯಂ ರಸ್ತೆ, ಚಿತ್ರದುರ್ಗ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಕಂಡಂತೆ ಹೊಂದಿರಬೇಕು.
ಸಾಮಾನ್ಯ ಅಭ್ಯರ್ಥಿಗಳು - 35
2ಎ, 2ಬಿ , 3ಎ, 3ಬಿ ಅಭ್ಯರ್ಥಿಗಳು - 38
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ - 1 ಅಭ್ಯರ್ಥಿಗಳು - 40
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments