ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 1130 ಹುದ್ದೆಗಳ ನೇಮಕಾತಿ l PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಾ ಕ್ರೀಡಾ ಕೂಟಅಡಿಯಲ್ಲಿ ಖಾಲಿ ಇರುವ 1130 ಕಾನ್ಸ್ಟೇಬಲ್ (ಅಗ್ನಿಶಾಮಕ) - ಅಗ್ನಿಶಾಮಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 31 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್ 2024
ಅರ್ಜಿ ನಮೂನೆ ತಿದ್ದುಪಡಿ ದಿನಾಂಕ : ಅಕ್ಟೋಬರ್ 10 - 12, 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, OBC, ಮತ್ತು EWS ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC, ST ಮತ್ತು PED ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ Rs.21,700 - 69,100/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments