ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 451 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (ಸಿಐ ಎಸ್ ಎಫ್) ಖಾಲಿ ಇರುವ 451 ಕಾನ್ಸ್ಟೇಬಲ್/ ಚಾಲಕ, ಕಾನ್ಸ್ಟೇಬಲ್/ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಪುರುಷ ಅಭ್ಯರ್ಥಿಗಳು ಕೊನೆಯ ದಿನಾಂಕ 22/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 451
ಕಾನ್ಸ್ಟೇಬಲ್/ ಚಾಲಕ - 183
ಕಾನ್ಸ್ಟೇಬಲ್/ಡ್ರೈವರ್ ಕಮ್ ಪಂಪ್ ಆಪರೇಟರ್ - 268
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ) ಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100/-ರೂ. ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗಿದೆ.
SC/ST/ ESM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ21,700/-ರಿಂದ 69,100/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments