ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯಲ್ಲಿ ಖಾಲಿ ಇರುವ 690 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:8 ಜನವರಿ 2021

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಇದು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದರ ಪ್ರಧಾನ ಕಚೇರಿಯು ನವದೆಹಲಿಯಲ್ಲಿದೆ. ಪ್ರಸ್ತುತ CISF ಪಡೆಯಲ್ಲಿ ಖಾಲಿ ಇರುವ ಒಟ್ಟು 690 ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
* ಈ ಹುದ್ದೆಗಳು ಕೇವಲ CISF ನಲ್ಲಿ ಈಗಾಗಲೇ ಸೇವೆಯಲ್ಲಿರುವ ಹೆಡ್ ಕಾನ್ಸ್ಟೇಬಲ್/ ಕಾನ್ಸ್ಟೇಬಲ್/ ಟ್ರೇಡ್ ಮ್ಯಾನ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ ಫೆಬ್ರುವರಿ 5, 2021 ರೊಳಗೆ ಸಲ್ಲಿಸಬಹುದು.
* ಹುದ್ದೆಗಳ ವಿವರ :
- ಸಾಮಾನ್ಯ ಅಭ್ಯರ್ಥಿಗಳಿಗೆ -536 ಹುದ್ದೆಗಳು
- ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ- 154 ಹುದ್ದೆಗಳು
- ಒಟ್ಟು ಹುದ್ದೆಗಳು - 690 ಹುದ್ದೆಗಳು
No. of posts: 690
Application End Date: 5 ಫೆಬ್ರುವರಿ 2021
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
- ದಿನಾಂಕ ಅಗಸ್ಟ 1, 2020 ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಠ - 35 ವರ್ಷ ವಯೋಮಿತಿಯನ್ನು ಮೀರಿರಬಾರದು, ಮತ್ತು
- ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಲಿಕೆ ನೀಡಲಾಗಿದೆ.
* ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯಿಂದ ಪಡೆದುಕೊಂಡು, ಭರ್ತಿ ಮಾಡಿ ಎಲ್ಲಾ ಮೂಲ ಧಾಖಲೆಗಳೊಂದಿಗೆ ಲಗ್ಗತಿಸಿದ ಅರ್ಜಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಕಚೇರಿಯ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ತಲುಪಿಸಬೇಕು.





Comments