ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF) ದಲ್ಲಿ ಖಾಲಿಯಿರುವ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 249 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರೀಡಾ ಕೋಟದಡಿಯಲ್ಲಿ ಅರ್ಹ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, CISFನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಇತರೆ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ / 12ನೇ ತರಗತಿ ಪಾಸ್ ಮಾಡಿರಬೇಕು.
* ಸಂಬಂಧಪಟ್ಟ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ/ರಾಜ್ಯ ಮಟ್ಟದಲ್ಲಿ/ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳಾಗಿ ಪ್ರಶಸ್ತಿ ಪಡೆದಿರಬೇಕು ಮತ್ತು ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
- ಸಾಮಾನ್ಯ ವರ್ಗದ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100/-
- ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಗಸ್ಟ್ 1,2021ರ ಅನ್ವಯ ಕನಿಷ್ಟ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಟ 23 ವರ್ಷ ವಯೋಮಿತಿ ಮೀರಿರಬಾರದು .
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತು ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Comments