ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 640 ಮೈನಿಂಗ್, ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಸಿಸ್ಟಮ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಗೇಟ್ -2024 ಪರೀಕ್ಷೆ ಬರೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ28 ಅಕ್ಟೋಬರ್ 2024 ಹಾಗೂ ಕೊನೆಯ ದಿನಾಂಕ 28 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವಿರ : 640
ಮೈನಿಂಗ್ : 263
ಸಿವಿಲ್: 91
ಇಲೆಕ್ಟ್ರಾನಿಕ್ಸ್ : 102
ಮೆಕ್ಯಾನಿಕಲ್ : 104
ಸಿಸ್ಟಮ್ : 41
ಇ ಅಂಡ್ ಟಿ: 39
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಬಿಇ / ಬಿ.ಟೆಕ್ / ಬಿ.ಎಸ್ಸಿ / ಎಂಸಿಎ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಿಳಿಗೆ 1180/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಹಾಗೂ SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3ವರ್ಷ ವಯೋಮಿತಿ ಸಡಿಲಿಕೆ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಅನುಗುಣವಾಗಿ 50,000/- ರೂ ಗಳಿಂದ 1,60,000/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು





Comments