ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 434 ಕಮ್ಯೂನಿಟಿ ಡೆವಲಪ್ಮೆಂಟ್, ಎನ್ವಿರಾನ್ಮೆಂಟ್, ಫೈನಾನ್ಸ್, ಮಾರ್ಕೆಟಿಂಗ್ & ಸೇಲ್ಸ್, ಸೆಕ್ಯೂರಿಟಿ ಮತ್ತು ಕೋಲ್ ಪ್ರೆಪರಶನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 15 ಜನವರಿ 2025 ಹಾಗೂ ಕೊನೆಯ ದಿನಾಂಕ 14 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವಿರ : 434
ಕಮ್ಯೂನಿಟಿ ಡೆವಲಪ್ಮೆಂಟ್ - 20
ಎನ್ವಿರಾನ್ಮೆಂಟ್ - 28
ಫೈನಾನ್ಸ್ - 03
ಲೀಗಲ್ - 18
ಮಾರ್ಕೆಟಿಂಗ್ & ಸೇಲ್ಸ್ - 25
ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ - 44
ಪರ್ಸ್ನಲ್ & HR - 97
ಸೆಕ್ಯೂರಿಟಿ - 31
ಕೋಲ್ ಪ್ರೆಪರಶನ್ - 68
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ B.Sc/ B.E/ B.Tech/ LLB/ CA/ ICWA ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಿಳಿಗೆ 1180/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಹಾಗೂ SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3ವರ್ಷ ವಯೋಮಿತಿ ಸಡಿಲಿಕೆ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಅನುಗುಣವಾಗಿ 50,000/- ರೂ ಗಳಿಂದ 1,80,000/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು





Comments