ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು44 ಎಕ್ಸಿಕ್ಯುಟಿವ್ ಟ್ರೈನಿ(ಮೆಕ್ಯಾನಿಕಲ್), ಎಲೆಕ್ಟ್ರಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್ ಮತ್ತು ಫೈನಾನ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ಬರವಣಿಗೆಯ ಕೌಶಲ್ಯಗಳು, ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 06 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 44
Executive Trainee (Mechanical) - 20
Executive Trainee (Electrical) - 4
Executive Trainee (Electronics) - 2
Executive Trainee (Naval Architecture) - 6
Executive Trainee (Civil) - 3
Executive Trainee (Information Technology) - 2
Executive Trainee (Human Resource) - 4
Executive Trainee (Finance) - 3
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಇತರ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 80,280/- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments