ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (CPCB) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (Central Pollution Control Board - CPCB) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧೀನದಲ್ಲಿರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ74 ಕನ್ಸಲ್ಟೆಂಟ್ ಎ, ಕನ್ಸಲ್ಟೆಂಟ್ ಬಿ ಮತ್ತು ಕನ್ಸಲ್ಟೆಂಟ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 74
ಕನ್ಸಲ್ಟೆಂಟ್ ಎ :19
ಕನ್ಸಲ್ಟೆಂಟ್ ಬಿ :52
ಕನ್ಸಲ್ಟೆಂಟ್ ಸಿ : 3
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಕನ್ಸಲ್ಟೆಂಟ್ ಎ : 60000/-
ಕನ್ಸಲ್ಟೆಂಟ್ ಬಿ : 80000/-
ಕನ್ಸಲ್ಟೆಂಟ್ ಸಿ : 100000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments