ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗದೆ

ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಆಫೀಸರ್, ಸೈ೦ಟಿಫಿಕ್ ಅಸಿಸ್ಟಂಟ್ ಹಾಗೂ ಇಂಜಿನಿಯರಿಂಗ್ ಅಸಿಸ್ಟಂಟ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 14 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 99
ಇಂಜಿನಿಯರಿಂಗ್ ಆಫೀಸರ್ - 40
ಸೈ೦ಟಿಫಿಕ್ ಅಸಿಸ್ಟಂಟ್ - 4
ಇಂಜಿನಿಯರಿಂಗ್ ಅಸಿಸ್ಟಂಟ್ - 13
ಟೆಕ್ನಿಷಿಯನ್ - 24
ಅಸಿಸ್ಟಂಟ್ - 18
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಇಂಜಿನಿಯರಿಂಗ್ ಆಫೀಸರ್ ಹುದ್ದೆಗಳಿಗೆ ಗೇಟ್ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳೀಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಉಳಿದ ಎಲ್ಲ ಹುದ್ದೆಗಳಿಗೆ ಕಂಪೌಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮಾಡುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 500 ರೂ ಅರ್ಜಿ 1000 ರೂ ವರೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಮೀಸಲಾತಿ ವರ್ಗದವರಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 2023 ಏಪ್ರಿಲ್ 14 ಕ್ಕೆ ಅನುಗುಣವಾಗುವಂತೆ ಕನಿಷ್ಠ 28 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರೂ ಗಳಿಂದ 1,42,400 ರೂ ಗಳವರೆಗೆ ಮಾಸಿಕ ವೇತನವನ್ನು ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments