ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 9223 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 9,223 ಭರ್ಜರಿ ಹುದ್ದೆಗಳ ನೇಮಾಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಕಾನ್ ಸ್ಟೇಬಲ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ಕಾರ್ಪೆಂಟರ್, ಗಾರ್ಡ್ ನರ್, ವಾಷರ್ ಮ್ಯಾನ್ ಹಾಗೂ ಸಫಾಯಿ ಕರ್ಮಾಚಾರಿ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.
- ಈ ಮೊದಲು ಅರ್ಜಿ ಸಲ್ಲಿಸುವ ದಿನಾಂಕವನ್ನು 25 ಏಪ್ರಿಲ್ 2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ 2 ಮೇ 2023 ರ ವರೆಗೆ ಅವಕಾಶ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಕೌಶಲ್ಯ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC / ST ಅಭ್ಯರ್ಥಿಗಳಿಗೆ 5 ವರ್ಷಗಳು
OBC ಅಭ್ಯರ್ಥಿಗಳಿಗೆ 3 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 21,700 /- ರೂ ಗಳಿಂದ 69,100/- ರೂ ಗಳ ವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments