ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ 22 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಜುಲೈ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 31 ಜುಲೈ 2024 ರಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 70 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments