ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಸಂಸ್ಥೆಯಲ್ಲಿ ಖಾಲಿ ಇರುವ 444 ಸೆಕ್ಷನ್ ಆಫೀಸರ್ ಮತ್ತು ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕವಾದ 12-01-2024ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಹುದ್ದೆಗಳ ವಿವರ : 444
ಸೆಕ್ಷನ್ ಆಫೀಸರ್ - 76
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ - 368
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಯಿಂದ ಯಾವುದಾದರು ಪದವಿ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 33 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳು 5 ವರ್ಷ
OBC ಅಭ್ಯರ್ಥಿಗಳು 3 ವರ್ಷ
PwBD ಅಭ್ಯರ್ಥಿಗಳು 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ಶ್ರೇಣಿಯನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments