Life is like this loading!

We've to prepare well to perform better

CSIR UGC ನೆಟ್ ಎಕ್ಸಾಮ್ ಗೆ 2019 ನೇ ಸಾಲಿನ ಅಧಿಸೂಚನೆ ಪ್ರಕಟವಾಗಿದ್ದು ಈ ಅಧಿಸೂಚನೆ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Author: Savita Halli | Date:17 ಸೆಪ್ಟೆಂಬರ್ 2019
Image not found

  ವೈಜ್ಞಾನಿಕ ಹಾಗೂ ಕೈಗಾರಿಕಾ ಸಂಶೋಧನಾ ಮಂಡಳಿ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಜಂಟಿಯಾಗಿ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಲೆಕ್ಚರ್ ಶಿಪ್ / ಅಸಿಸ್ಟಂಟ್ ಪ್ರೊಫೆಸರ್ ಶಿಪ್ ಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ(NET) ದಿನಾಂಕ ಪ್ರಕಟಗೊಂಡಿದೆ.
ಬರುವ ಡಿಸೆಂಬರ್ 15 ರಂದು ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೀಡಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ(NTA) ನಡೆಸಲಿದೆ.
ಈ ಪರೀಕ್ಷೆ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ನೀಡಲಾಗುತ್ತದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯ ಭೋದಿಸುವ ಉಪನ್ಯಾಸಕರಿಗೆ, ಸಹಾಯಕ ಪ್ರಾಧ್ಯಾಪಕರಿಗೆ ಅರ್ಹತೆ ನಿಗದಿಪಡಿಸಲಾಗುತ್ತದೆ.
ಫೆಲೋಶಿಪ್ ಗೆ ಅರ್ಹತೆ ಪಡೆಯುವ ಅಭ್ಯರ್ಥಿಗಳು ಮಾಸಿಕ 31000 ರೂ.ಸ್ಟೈಫೆಂಡ್ ಪಡೆಯಬಹುದಾಗಿದೆ. ಅಭ್ಯರ್ಥಿಗಳು
ಜೆ ಆರ್ ಎಫ್ ಮತ್ತು ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಎರಡಕ್ಕೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯಲ್ಲಿ ತಮ್ಮ ಆದ್ಯತೆಯನ್ನು ತಿಳಿಸಬೇಕಾಗುತ್ತದೆ. ಫಲಿತಾಂಶ ಪ್ರಕಟಿಸುವಾಗಲೇ ಎರಡಕ್ಕೂ ಪ್ರತ್ಯೇಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. JRF ಅರ್ಹತೆ ಪಡೆದರು ಉನ್ನತ ವಿದ್ಯಾಭ್ಯಾಸ ಅಥವಾ ಸಂಶೋಧನೆಗಾಗಿ ದೇಶದ ವಿವಿಧ ವಿಶ್ವವಿದ್ಯಾಲಯ, ಸಂಶೋಧನಾ ಸಂಸ್ಥೆಗಳನ್ನು ಸೇರಬಹುದು.

Application Start Date:  15 ಸೆಪ್ಟೆಂಬರ್ 2019

Application End Date:  9 ಅಕ್ಟೋಬರ್ 2019

Last Date for Payment:  10 ಅಕ್ಟೋಬರ್ 2019

Selection Procedure:  ಈ ಅರ್ಹತಾ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಾಗಿರುತ್ತದೆ. ಅಭ್ಯರ್ಥಿಗಳನ್ನು CBT ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು

Qualification:  MSc ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು (ಬಿಎಸ್-ಎಂಎಸ್/ ಎಸ್- 4 ವರ್ಷ /ಬಿಇ/ ಬಿಟೆಕ್ / ಬಿ ಫಾರ್ಮ್/ ಎಂಬಿಬಿಎಸ್ ಪದವಿ ಸಂಯೋಜಿತ) ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ. ಈಗಾಗಲೇ MSc ಗೆ ಸೇರ್ಪಡೆಗೊಂಡರು ಅರ್ಜಿ ಸಲ್ಲಿಸಬಹುದು.

Fee:  -ಸಾಮಾನ್ಯ ವರ್ಗದ ಅಭ್ಯರ್ಥಿಗಳು 1000ರೂ.
-ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ಮತ್ತು
-SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಆನ್ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.

Age Limit:  * ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ (2019 ಜುಲೈ 1ಕ್ಕೆ ಅನ್ವಯವಾಗುವಂತೆ) SC-ST ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 33 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 31 ವರ್ಷ.
* ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿಲ್ಲ.

* ಈ ಮೇಲಿನ ಲಿಂಕ್ ಗಳು ಓಪನ್ ಆಗದೆ ಇದ್ದಲ್ಲಿ browser ಬಳಸಿ kpscvaani.com ಜಾಲತಾಣಕ್ಕೆ ಭೇಟಿ ನೀಡಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ