ಬೆಂಗಳೂರಿನಲ್ಲಿರುವ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
* ಔಷಧಿ ವಿತಕರು : 01
* ಶುಶ್ರೂಷಕರು : 01
ಈ ಹುದ್ದೆಗಳಿಗೆ ದಿನಾಂಕ 05 ಜನೆವರಿ 2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ,
ಇಂದಿರಾನಗರ, ಬೆಂಗಳೂರು-560038.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಬ್ಯಾಚುಲರ್ ಆಫ್ ಫಾರ್ಮಸಿ/ ಡಿಪ್ಲೋಮಾ ಇನ್ ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್/ ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು.
ವೇತನ ಶ್ರೇಣಿ :
* ಔಷಧಿ ವಿತರಕರು : 13000/-
* ಶುಶ್ರೂಷಕರು : 13000/-
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments