ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ153 ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಅಕೌಂಟೆಂಟ್, ಸುಪರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ24-09-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 153
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) - 18
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) - 05
ಅಕೌಂಟೆಂಟ್ - 24
ಸುಪರಿಟೆಂಡೆಂಟ್ (ಜನರಲ್) - 11
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ - 81
ಸುಪರಿಟೆಂಡೆಂಟ್ (ಜನರಲ್) ಎಸ್ ಆರ್ ಡಿ (ಎನ್ಇ) - 02
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಎಸ್ ಆರ್ ಡಿ (ಎನ್ಇ) - 10
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಎಸ್ ಆರ್ ಡಿ (ಯು ಟಿ ಆಫ್ ಲಡಾಖ್) - 02
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ನರ್ಸಿಂಗ್ ಮತ್ತು Engineering/ B.E/ B.Tech/ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕನಿಷ್ಠ 3 ವರ್ಷದ ಸೇವಾನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 1,250/- ರೂ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಗರಿಷ್ಠ 28 ವರ್ಷದೊಳಗಿರಬೇಕು. ಹಾಗೂ ಇತರ ಎಲ್ಲ ಹುದ್ದೆಗಳಿಗೆ 30 ವರ್ಷದೊಳಗಿರಬೇಕು.
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷ
PWD ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ರೂ 29,000/- ರಿಂದ 1,40,000/- ರೂ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ





Comments