ಕೇಂದ್ರ ಅಣುಶಕ್ತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಕೇಂದ್ರ ಅಣುಶಕ್ತಿ ಇಲಾಖೆಯ ಖರೀದಿ ಮತ್ತು ಮಳಿಗೆಗಳಲ್ಲಿ ಖಾಲಿ ಇರುವ 65 ಜೂನಿಯರ್ ಪರ್ಚೆಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/ಮಹಿಳಾ/ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ (15-ಮೇ-2023) ಅನುಗುಣವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ 25,500/- ರಿಂದ 81,100/- ರೂಗಳ ವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments