ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಯ ತಾಲ್ಲೂಕು ಪಂಚಾಯಿತ್ ಗಳಿಗೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ 6 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ 10-10-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 21,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆತಿಂಗಳಿಗೆ 14,543.60/-ರೂಗಳ ವೇತನವನ್ನು ನೀಡಲಾಗುವುದು.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments