ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 20 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
Technical Assistant (Civil) 4
Technical Assistant (Agriculture) 1
Technical Assistant (Horticulture) 6
Technical Assistant (Forest) 2
Technical Assistant (Sericulture) 1
Administrative Assistant 6
ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 24-08-2023 ರೊಳಗಾಗಿ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Engineering/ ಬಿ.ಎಸ್ಸಿ/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಟೆಕ್ನಿಕಲ್ ಅಸಿಸ್ಟೆಂಟ್ : 28000/-
ಅಡ್ಮಿನ್ ಅಸಿಸ್ಟೆಂಟ್ : 22000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments