ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರ ಜಿಲ್ಲೆಯಲ್ಲಿ ಖಾಲಿ ಇರುವ 3 ತಾಂತ್ರಿಕ ಅಧಿಕಾರಿ, ತಾಂತ್ರಿಕ ಸಹಾಯಕ ಮತ್ತು ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2023 ರೊಳಗೆ ಆನ್ ಲೈನ್ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹುದ್ದೆಗಳ ವಿವರ: 3
- ತಾಂತ್ರಿಕ ಅಧಿಕಾರಿ : 1
- ತಾಂತ್ರಿಕ ಸಹಾಯಕ : 1
- ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : 1
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E / B.Tech / M.Tech / PWD/ PRED/ B.Com/ M.Com/ M.E/ CA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
* ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ಹಾಗು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನತ್ತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ತಾಂತ್ರಿಕ ಅಧಿಕಾರಿ : ರೂ.30000/-
- ತಾಂತ್ರಿಕ ಸಹಾಯಕ : ರೂ.25000/-
- ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : ರೂ.23000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments